ಉಡುಪಿ : ಕರ್ನಾಟಕ ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಒಬ್ಬ ಖಾಸಗಿ ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಕುಂದಾಪುರದ ಜೆಕೆ ಟವರ್ಸ್ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಮೊಗ್ಗ ಮೂಲದ ಪ್ರಶಾಂತ್ (37) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮೂಲದ ಪ್ರಶಾಂತ್ ವಿವಾಹಿತನಾಗಿದ್ದು, ಒಂದು ಪುಟ್ಟ ಮಗುವಿದೆ. ಈತನಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. 2010ರಲ್ಲಿ ಆರೋಗ್ಯ ಇಲಾಖೆಗೆ ಸೇರಿದ್ದ ಪ್ರಶಾಂತ್ ಕಾರ್ಕಳದಲ್ಲಿ ಸೇವೆಗೆ ಸೇರಿದ್ದರು. ಬಳಿಕ ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ. ಬಳಿಕ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಂದು ತಿಳಿದುಬಂದಿದೆ. ಮಾನಸಿಕವಾಗಿ ನೊಂದಿದ್ದು ತನ್ನ ಸ್ನೇಹಿತರ ಜೊತೆಗೆ ಜೀವನದಲ್ಲಿ ಜಿಗುಪ್ಸೆ ಉಂಟಾಗಿದೆ ಎಂದು ಆಗಾಗ ಹೇಳಿಕೊಳ್ಳುತ್ತಿದ್ದ ಎನ್ನಲಾಗಿದೆ. ಸ್ನೇಹಿತರು ಆತನಿಗೆ ಬುದ್ಧಿ ಹೇಳಿ ಸಮಾಧಾನಿಸುತ್ತಿದ್ದರು. ಆದರೆ ಗುರುವಾರ ಕುಂದಾಪುರದ ಖಾಸಗಿ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದು, ಮಲಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ ಆತ ಯಾವುದೋ ವಿಷ ಪದಾರ್ಥ ಸೇವಿಸಿರಬಹುದೇ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದೇ ಎನ್ನುವ ಶಂಕೆ ವ್ಯಕ್ತವಾಗಿದೆ. ಕುಂದಾಪುರ ಸರ್ಕಾರೀ ಆಸ್ಪತ್ರೆಯಲ್ಲಿ ಮರಣೋತ್ತರ ಶವ ಪರೀಲ್ಷೆ ಬಳಿಕ ಸಾವಿನ ನಿಖರವಾದವಕಾರಣ ತಿಳಿದು ಬರಲಿದೆ. ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.
Check Also
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …