BIGG NEWS : ಉಡುಪಿ ಜಿಲ್ಲೆಯಲ್ಲೂ ಧರ್ಮ ಸಂಘರ್ಷ : ಕೋಡಿಹಬ್ಬ, ಉಪ್ಪಂದಜಾತ್ರೆಗಳಲ್ಲಿ ಅನ್ಯಧರ್ಮೀಯರ ವ್ಯಾಪಾರ ನಿರ್ಬಂಧ

ಉಡುಪಿ : ಜಿಲ್ಲೆಯಲ್ಲೂ ಧರ್ಮ ಸಂಘರ್ಷ ಶುರುವಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ.

ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಭಯೋತ್ಪಾದನೆ, ಲವ್ ಜಿಹಾದ್ ನಂತಹ ಪ್ರಕರಣ ಹೆಚ್ಚಿರುವ ಕಾರಣಕ್ಕೆ ಹಿಂದೂ ಸಂಘಟನೆಗಳು ಈ ರೀತಿಯ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಸಂಘಟನೆಗಳ ಬೇಡಿಕೆಗೆ ವ್ಯವಸ್ಥಾಪನಾ ಸಮಿತಿ ಸಮ್ಮತಿಸುವ ಸಾಧ್ಯತೆಯಿದೆ ಹಾಗಾಗಿ ಜಿಲ್ಲೆಯ ಪ್ರಸಿದ್ದ ಕೋಟೇಶ್ವರದ ಕೋಡಿ ಹಬ್ಬ & ಉಪ್ಪಂದ ಜಾತ್ರೆಗಳು ಡಿಸೆಂಬರ್ 8 -9 ರಂದು ಶುರುವಾಗಲಿದ್ದು, ಈ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಹಿಂದೂ ಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್, ಭಜರಂಗದಳ ಮನವಿ ಮಾಡಲಾಗಿದೆ.

ಇನ್ನು ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲೂ ಧರ್ಮ ಸಂಘರ್ಷ ಶುರುವಾಗಿದೆ. ಡಿಸೆಂಬರ್​ 9.10. 11ರಂದು ನೆರವೇರಲಿರುವ ಜಾತ್ರೆಯಲ್ಲಿ ದೇವಸ್ಥಾನದ ಆವರಣದಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ಅವಕಾಶವಿಲ್ಲ.ಭಜರಂಗದಳ, ವಿಶ್ವ ಹಿಂದೂ ಪರಿಷತ್​, ಹಿಂದೂ ಜಾಗರಣ ವೇದಿಕೆಯ ಒತ್ತಾಯದ ಮೇರೆಗೆ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ.

ದೇವಸ್ಥಾನದ ಆಡಳಿತ ಮಂಡಳಿಯ ಆಡಳಿತಾಧಿಕಾರಿಯಿಂದ ಸಹಾಯಕ ಕಮಿಷನರ್​ಗೆ ಈಗಾಗಲೇ ನಿರ್ಣಯವನ್ನು ರವಾನೆ ಮಾಡಲಾಗಿದೆ. ಕೋಡಿಹಬ್ಬ, ಉಪ್ಪಂದಜಾತ್ರೆಗಳಲ್ಲಿ ಅನ್ಯಧರ್ಮೀಯರ ವ್ಯಾಪಾರ ನಿರ್ಬಂಧ ಹೇರಲಾಗುತ್ತಾ ಅನ್ನೋದನ್ನು ಕಾದು ನೋಡಬೇಕಾಗಿದೆ

Check Also

ಸಂಸದ ಕೋಟ ಶ್ರೀನಿವಾಸ ಪೂಜಾರಿ ತಾಯಿ ಲಚ್ಚಿ ಪೂಜಾರ್ತಿ ನಿಧನ!

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರ್ತಿ (97) …

Leave a Reply

Your email address will not be published. Required fields are marked *

You cannot copy content of this page.