ಬೆಂಗಳೂರು: SSLC ಪರೀಕ್ಷೆ- 1ರ ಫಲಿತಾಂಶವನ್ನು ಮೇ 9ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಕ್ರೋಢೀಕರಣ ಪ್ರಗತಿಯಲ್ಲಿದೆ. ಈಗಾಗಿ ಮೇ 9ರಂದು ಫಲಿತಾಂಶ ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಇನ್ನು SSLC ಪರೀಕ್ಷೆ – 1 ಮಾರ್ಚ್ 25ರಂದು ಪ್ರಾರಂಭಗೊಂದು ಏಪ್ರಿಲ್ 6ರವರೆಗೂ ನಡೆದಿತ್ತು. ಹಾಗೂ ಈ ಬಾರಿ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಯಿತು.