![WhatsApp Image 2024-09-07 at 10.37.39 AM](https://i0.wp.com/thrishulnews.com/wp-content/uploads/2024/09/WhatsApp-Image-2024-09-07-at-10.37.39-AM.jpeg?fit=420%2C236&ssl=1?v=1725685681)
![](https://i0.wp.com/thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg?fit=1050%2C600&ssl=1)
ಉಡುಪಿ: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ನಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸೆಪ್ಟೆಂಬರ್ 7 ರಂದು ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 9 ಮತ್ತು ಸೆಪ್ಟೆಂಬರ್ 11 ರಂದು ಮದ್ಯ ಮಾರಾಟವನ್ನು ಬೆಳಿಗ್ಗೆ 6 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.