ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಕಲ್ಪಿಸಿರುವುದರ ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.ಹೌದು 10 ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ನಿರ್ಧಾರವನ್ನ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠವು ಇಡಬ್ಲ್ಯೂಎಸ್ ಮೀಸಲಾತಿಗೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದೆ.
ಕೇಂದ್ರ ಸರ್ಕಾರದಿಂದ ಇಡಬ್ಲ್ಯುಎಸ್ ಗೆ 10% ಮೀಸಲಾತಿ ಒದಗಿಸುವ 103ನೇ ಸಾಂವಿಧಾನಿಕ ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ 40ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆ ಆಗಿದ್ದವು. ಜಸ್ಟೀಸ್ ಉದಯ್ ಲಲಿತ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠದಿಂದ ನಾಲ್ವರು ನ್ಯಾಯಮೂರ್ತಿಗಳು ಪ್ರತ್ಯೇಕವಾಗಿ ತೀರ್ಪನ್ನ ಪ್ರಕಟಿಸಿದರು. ಜಸ್ಟೀಸ್ ಜೆ.ಎಂ.ಪರ್ದಿವಾಲಾ, ಜಸ್ಟೀಸ್ ಬೇಲಾ ಎಂ. ತ್ರಿವೇದಿ, ಜಸ್ಟೀಸ್ ದಿನೇಶ್ ಮಹೇಶ್ವರಿ ಅವರು ಆರ್ಥಿಕವಾಗಿ ಹಿಂದೂಳಿದ ವರ್ಗಗಳಿಗೆ ಶೇಕಡಾ 10 ಮೀಸಲಾತಿ ನೀಡುವ ಪರ ತೀರ್ಪು ನೀಡಿದರು.
3-2 ಅನುಪಾತದಲ್ಲಿ ಬಹುಮತ ತತ್ವದ ಆಧಾರದ ಮೇಲೆ ಸುಪ್ರೀಂಕೋರ್ಟ್ ಶೇಕಡಾ 10 ಮೀಸಲಾತಿಯನ್ನ ಎತ್ತಿ ಹಿಡಿದಿದೆ.