![WhatsApp Image 2022-11-07 at 9.26.27 AM](https://i0.wp.com/thrishulnews.com/wp-content/uploads/2022/11/WhatsApp-Image-2022-11-07-at-9.26.27-AM.jpeg?fit=700%2C400&ssl=1)
![](https://i0.wp.com/thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg?fit=1050%2C600&ssl=1)
ಬ್ರಹ್ಮಾವರ: ವಿವಾಹಿತ ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿನ್ಸಿ ಶೈಜು ಥೋಮಸ್ (30) ಆತ್ಮಹತ್ಯೆ ಮಾಡಿಕೊಂಡವರು. ಇವರು ವಿವಾಹಿತರಾಗಿದ್ದು ಇವರ ಗಂಡ ಉದ್ಯೋಗದ ನಿಮಿತ್ತ ದುಬೈಯಲ್ಲಿದ್ದರು. ಇವರು ಮಗಳೊಂದಿಗೆ ಗಂಡನ ಮನೆಯಾದ ಹಂದಾಡಿ ಗ್ರಾಮದ ಬೇಳೂರುಜೆಡ್ಡು ಎಂಬಲ್ಲಿ ವಾಸವಾಗಿದ್ದು, ಅತ್ತೆ, ಮಾವ ಅದೇ ಮನೆಯ ಕೆಳ ಅಂತಸ್ತಿನಲ್ಲಿ ವಾಸವಾಗಿದ್ದರು.
ಬಿನ್ಸಿ ಶೈಜು ಥೋಮಸ್ ಅವರು ಅಕ್ಟೋಬರ್ 26ರಂದು ರಾತ್ರಿ ಇಲಿ ಪಾಷಾಣ ಸೇವಿಸಿ ಡೆತ್ ನೋಟ್ ಬರೆದಿಟ್ಟು ಯಾರಿಗೂ ಹೇಳದೆ ಮನೆಯಲ್ಲಿದ್ದರು. ಅಕ್ಟೋಬರ್ 31ರಂದು ಮನೆಯಲ್ಲಿ ತೀವ್ರ ವಾಂತಿ ಭೇದಿಯಿಂದ ಅಸ್ವಸ್ಥಗೊಂಡು ಬಳಲುತ್ತಿದ್ದವರನ್ನು ಚಿಕಿತ್ಸೆಗಾಗಿ ಬ್ರಹ್ಮಾವರದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವೈದ್ಯರ ಸಲಹೆಯಂತೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿನ್ಸಿ ಶೈಜು ಥೋಮಸ್ ಅವರು ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 5ರಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.