

ಕೋಲಾರ: ಜಿಲ್ಲೆಯ ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದ ಸುಟ್ಟು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಈ ಘಟನೆ ಒಂದು ಮಗು ಸತ್ತಿದ್ದರೆ, ಇನ್ನೊಂದರ ಸ್ಥಿತಿ ಗಂಭೀರವಾಗಿದೆ.ಜ್ಯೋತಿ ಎಂಬಾಕೆ ಈ ಬೆಟ್ಟಕ್ಕೆ ಬಂದಿದ್ದು, ತಾಯಿ ತನ್ನಿಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಸುಟ್ಟಿದ್ದಾಳೆ. ಇದರದಲ್ಲಿ ಒಂದು ಮಗು ಸಾವನ್ನಪ್ಪಿದ್ದು, ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ತನ್ನನ್ನು ಸುಟ್ಟುಕೊಳ್ಳಲು ಧೈರ್ಯವಾಗದೆ ಕುಳಿತಿದ್ದ ಈಕೆಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಮುಳಬಾಗಿಲು ಪೊಲೀಸರು ಭೇಟಿ ನೀಡಿದ್ದು, ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಗೆ ನಿಖರವಾಗಿ ಕಾರಣ ತಿಳಿದುಬಂದಿಲ್ಲ.