ಬಂಟ್ವಾಳದ ಯುವಕ ಕತಾರ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತ್ಯು

ಬಂಟ್ವಾಳ : ಕತಾರ್ ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಬಂಟ್ವಾಳ ಮೂಲದ ಯುವಕ ಮೃತಪಟ್ಟ ಘಟನೆ ನಡೆದಿದೆ.

ಬಂಟ್ವಾಳ ಸಜಿಪದ ಚಟ್ಟೆಕ್ಕಲ್ ನಿವಾಸಿ ಫಹದ್ ಮೃತ ಯುವಕ. ಫಹದ್ ಕಳೆದ ಐದು ತಿಂಗಳ ಹಿಂದೆಯಷ್ಠೇ ಕತಾರ್ ಗೆ ಉದ್ಯೋಗದ ನಿಮಿತ್ತ ತೆರಳಿದ್ದ.ಅಲ್ಲಿ ಕೆಲಸ ಮಾಡುವ ಸ್ಥಳದಲ್ಲಿ ತನ್ನ ಮಾಲಕನ ಮಗನನ್ನು ರೆಸಾರ್ಟ್ ಗೆ ಬಿಟ್ಟು ಬರಲು ಕಾರಿನಲ್ಲಿ ತೆರಳಿದ್ದಾನೆ. ಕಾರಿನಲ್ಲಿ ಬಿಟ್ಟು ವಾಪಾಸ್ಸು ಬರುವಾಗ ಕಾರು ಪಲ್ಟಿಯಾಗಿ ಫಹದ್ ಗೆ ಗಂಭೀರವಾದ ಗಾಯಗಳಾಗಿದೆ.

ತಕ್ಷಣ ಪಹದ್ ಗೆ ಆಸ್ಪತ್ರೆಗೆ ಸಾಗಿಸಲಾಗಿದೆ ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ.ಫಹದ್ ನಿಧನದಿಂದ ಕುಟುಂಬದ ರೋಧನ ಮುಗಿಲು ಮುಟ್ಟಿದೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.