ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ -ಸಿಪಿಐ, ಪತ್ನಿ ಸಾವು

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ವಿಜಯಪುರ ಜಿಲ್ಲಾ ಸಿಂದಗಿ ತಾಲೂಕಿನ ಸಿಪಿಐ ಹಾಗೂ ಅವರ ಪತ್ನಿ ಸಾವಿಗೀಡಾಗಿದ್ದಾರೆ.

ಬುಧವಾರ ಮಧ್ಯಾಹ್ನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ, ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು (Swift Desire Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಿಪಿಐ ರವಿ ಉಕ್ಕುಂದ (43), ಪತ್ನಿ ಮಧು (40) ದುರ್ಮರಣ ಹೊಂದಿದ್ದಾರೆ.

ಸಿಂದಗಿಯಿಂದ ಕಲಬುರಗಿ ನಗರಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದ ಸಿಪಿಐ ದಂಪತಿ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ದೌಡಾಯಿಸಿದ್ದು, ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಪೆನ್‌ಡ್ರೈವ ಹಂಚಿಕೆ ಪ್ರಕರಣ – ಕೊನೆಗೂ ಅರೆಸ್ಟ್ ಆದ ಸಚಿವ ಜಮೀರ್ ಶಿಷ್ಯ ನವೀನ್, ಚೇತನ್

ಬೆಂಗಳೂರು : ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಸಚಿವ ಜಮೀರ್ ಶಿಷ್ಯ ನವೀನ್ ಗೌಡ ಹಾಗೂ ಚೇತನ್‌ನನ್ನ …

Leave a Reply

Your email address will not be published. Required fields are marked *

You cannot copy content of this page.