ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯಡಿ 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬAಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿAದ ಮಾಹಿತಿ ಪಡೆದು, ಪ್ರೂಟ್ಸ್ ಐಡಿ ಮಾಡಿಕೊಳ್ಳುವ ಅವಧಿಯನ್ನು ಡಿಸೆಂಬರ್ 15 ರ ವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.