ಮಡಿಕೇರಿ: ಜಿಲ್ಲೆಯಲ್ಲಿ ಮತಾಂತರಕ್ಕೆ ಪ್ರಚೋದಿಸಿ ಯತ್ನಿಸಿದಂತ ಆರೋಗ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕನನ್ನು ಪೊಲೀಸರು ಬಂಧಿಸಿರೋದಾಗಿ ತಿಳಿದು ಬಂದಿದೆ.
ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಸ್ ನಿಲ್ದಾಣದ ಬಳಿಯಲ್ಲಿ, ಕ್ರೈಸ್ತ ಧರ್ಮ ಮತಾಂತರಕ್ಕೆ ಪ್ರಚೋದಿಸಿದ್ದ ಎಂಬ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯ ಪ್ರಥಮ ದರ್ಜೆ ಸಹಾಯಕ ನಿಶಾಂತ್ ಹೆಚ್ ಬಿ ಎನ್ನುವವರನ್ನು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ನಿಶಾಂತ್ ಬಳಿಯಲ್ಲಿ ಇದ್ದಂತ ಕ್ರೈಸ್ತ ಮಿಷನರಿ ಪುಸ್ತಕಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ನಿಶಾಂತ್ ಹೆಚ್ ಬಿ ಅವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.