ಶ್ರೀರಾಮ ಸೇನೆ ಜಿಲ್ಲಾ ಘಟಕ ಅಧ್ಯಕ್ಷನ ಮೇಲೆ ಗುಂಡಿನ ದಾಳಿ: ಜಿಲ್ಲೆಯಲ್ಲಿ ಕಟ್ಟೆಚ್ಚರ

ಬೆಳಗಾವಿ ಸಮೀಪದ ಹಿಂಡಲಗಾ ಗ್ರಾಮದಲ್ಲಿ ಶನಿವಾರ ರಾತ್ರಿ ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಾಗೂ ಮುಖಂಡನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಕೋಕಿತ್ಕರ್‌ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ದೇಸೂರಕರ್‌ ಗುಂಡೇಟಿನಿಂದ ಗಾಯಗೊಂಡಿದ್ದಾರೆ.

ಶ್ರೀರಾಮ ಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ ಪ್ರಕರಣದ ತನಿಖೆಗೆ 4 ಪ್ರತ್ಯೇಕ ತಂಡಗಳ ರಚನೆ ಮಾಡಲಾಗಿದ್ದು, ಆರೋಪಿಗಳನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ತಿಳಿಸಿದ್ದಾರೆ.

ಬೆಳಗಾವಿ ನಗರದಿಂದ ಹಿಂಡಲಗಾ ಗ್ರಾಮಕ್ಕೆ ರವಿ ಕೋಕಿತಕರ್ ತೆರಳುವಾಗ ಶನಿವಾರ ಸಂಜೆ 7.30ರ ಸುಮಾರಿಗೆ ದಾಳಿ ನಡೆದಿದೆ. ಹಂಪ್ ಹತ್ತಿರ ಕಾರು ವೇಗ ಕಡಿಮೆಯಾದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಫೈರಿಂಗ್ ಮಾಡಿದ್ದಾರೆ. ಮೊದಲಿಗೆ ರವಿ ಕೋಕಿತಕರ್ ಕೆನ್ನೆಗೆ ಗುಂಡು ತಾಕಿ ಬಳಿಕ ಚಾಲಕನ ಕೈ ಹೊಕ್ಕಿದೆ. ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆಗೆ ವೈಯಕ್ತಿಕ ಅಥವಾ ಇತರ ಕಾರಣವೋ ಎಂಬ ಬಗ್ಗೆ ತನಿಖೆ ಮಾಡಲಾಗುತ್ತಿದೆ. ಯಾರೂ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಪ್ರಕರಣದ ತನಿಖೆಗೆ ನಾಲ್ಕು ತಂಡ ರಚನೆ ಮಾಡಿದ್ದು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದೇವೆ. ಮುಂಜಾಗ್ರತಾ ಕ್ರಮವಾಗಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ‌ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

Check Also

ಮಂಗಳೂರು: ವಿಡಿಯೋ ಲೈಕ್ ಮಾಡಿ 5 ಲಕ್ಷ ಕಳೆದುಕೊಂಡರು..!

ಮಂಗಳೂರು: ಆನ್‌ಲೈನ್ ಗಳಿಕೆಯ ನಕಲಿ ಜಾಲಕ್ಕೆ ಸಿಲುಕಿ ವ್ಯಕ್ತಿಯೊಬ್ಬರು 5 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸೆ. 28ರಂದು ದೂರುದಾರರು ಇನ್ …

Leave a Reply

Your email address will not be published. Required fields are marked *

You cannot copy content of this page.