ಮಂಗಳೂರು: ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು ಫೆಬ್ರವರಿ 10 ಶುಕ್ರವಾರ ಮಂಗಳೂರಿನಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.
ಪೊಲೀಸ್ ಇಲಾಖೆಗೆ ಸಂಬಂಧಿಸಿದ ನೈಜ ವೈಯಕ್ತಿಕ ಅಥವಾ ಸಾರ್ವಜನಿಕ ಕುಂದುಕೊರತೆಗಳಿರುವ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಜನರು ಶುಕ್ರವಾರ ಸಂಜೆ 7 ಗಂಟೆಗೆ ಐಜಿಪಿ ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಸಾಮಾನ್ಯ ನಾಗರಿಕರ ಸೇವೆಯೇ ಇಲಾಖೆಯ ಧ್ಯೇಯವಾಗಿದೆ ಎಂದು ತಮ್ಮ ಸಂದೇಶದಲ್ಲಿ ಅಲೋಕ್ ಕುಮಾರ್ ತಿಳಿಸಿದ್ದಾರೆ