
ಉಡುಪಿ: ಅಂಬಾಗಿಲು ಜಂಕ್ಷನ್ ನಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಕುರಿತು ವರದಿಯಾಗಿದೆ.
ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಬೈಕ್ ಬಸ್ಸಿನಡಿ ಸಿಲುಕಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಚಾಲಕನನ್ನು ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಾಯಾಳು ಮೃತಪಟ್ಟಿರುವ ಕುರಿತು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಮೃತರನ್ನು ರವಿ ಪೂಜಾರಿ (44) ಸುಬ್ರಮಣ್ಯ ನಗರ ಪುತ್ತೂರು ಎಂದು ಗುರುತಿಸಲಾಗಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.
