ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ: ಯಾವ ನಕ್ಷತ್ರ, ರಾಶಿಗಳಿಗೆ ದೋಷ? ಏನ್‌ ಮಾಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ಇಂದು ಕಾರ್ತಿಕ ಮಾಸ ಹುಣ್ಣಿಮೆ ದಿನ ರಾಹುಗ್ರಸ್ತ ಚಂದ್ರಗ್ರಹಣ ಗೋಚರಿಸಲಿದೆ.ಕರುನಾಡಿನಲ್ಲಿಯೂ ಪಾರ್ಶ್ವ ಚಂದ್ರಗ್ರಹಣದ ಛಾಯೆ ಗೋಚರಿಸಲಿದೆ.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸೂರ್ಯಗ್ರಹಣ ಸಂಭವಿಸಿತ್ತು. ಇದೀಗ 15 ದಿನದ ಅಂತರದಲ್ಲಿಯೇ ಕಾರ್ತಿಕ ಪೂರ್ಣಿಮೆಯ ದಿನ ರಾಹುಗ್ರಸ್ಥ ಚಂದ್ರಗ್ರಹಣ ಸಂಭವಿಸಲಿದೆ. 15 ದಿನದ ಅಂತರದಲ್ಲಿ ಎರಡು ಗ್ರಹಣ ಸಂಭವಿಸಿರೋದ್ರಿಂದ ಜ್ಯೋತಿಷ್ಯ ಶಾಸ್ತ್ರದಲ್ಲಿ ಸಹಜವಾಗಿ ಪ್ರಾಮುಖ್ಯತೆ ಪಡೆದುಕೊಂಡಿದೆ. ಭರಣಿ ನಕ್ಷತ್ರ ಮೇಷರಾಶಿಯಲ್ಲಿ ಸಂಭವಿಸಲಿರುವ ಗ್ರಹಣದಿಂದ ಕೆಲ ರಾಶಿಯವರಿಗೆ ಅಪತ್ತು ಕೆಲ ರಾಶಿಯವರಿಗೆ ಉತ್ತಮವೂ ಆಗಲಿದೆ ಎನ್ನುವ ವಿಶ್ಲೇಷಣೆಗಳು ಕೇಳಿಬಂದಿದೆ.

ರಾಹುಗ್ರಸ್ಥ ಚಂದ್ರ ಗ್ರಹಣದ ಅವಧಿ ಹೀಗಿದೆ:
> ಗ್ರಹಣ ಸ್ಪರ್ಶಕಾಲ – 2.39ಕ್ಕೆ
> ಗ್ರಹಣ ಮಧ್ಯಕಾಲ – 4.29ಕ್ಕೆ
> ಗ್ರಹಣ ಮೋಕ್ಷಕಾಲ – 6.19ಕ್ಕೆ

ಗ್ರಹಣ ದೋಷವಿರುವ ನಕ್ಷತ್ರ, ರಾಶಿಗಳು:
ನಕ್ಷತ್ರಗಳು – ಅಶ್ವಿನಿ, ಭರಣಿ, ಕೃತ್ತಿಕಾ, ಪೂರ್ವೆ(ಹುಬ್ಬಾ), ಪೂರ್ವಷಾಢಾ
ರಾಶಿಗಳು – ಮೇಷ, ವೃಷಭ, ಕನ್ಯಾ, ವೃಶ್ಚಿಕ

ಗ್ರಹಣಾಚರಣೆ ಯಾವ ಕ್ರಮ ಅನುಸರಿಸಬೇಕು..?
– ಗ್ರಹಣ ಸ್ಪರ್ಶಕಾಲದಲ್ಲಿ ಸ್ನಾನ ಮಾಡುವುದು
– ದೇವರ ಸ್ತೋತ್ರ ಪಠಣೆ
– ಮನೆಯಲ್ಲಿ ದೇವರಿಗೆ ದೀಪ ಹಚ್ಚಿ ಜಪ
– ಗ್ರಹಣ ಅವಧಿಯಲ್ಲಿ ಮನೆಯಿಂದ ಹೊರಬಾರದೇ ಇರುವುದು
– ಗ್ರಹಣ ಮೋಕ್ಷದ ನಂತರ ಸ್ನಾನ ಮಾಡುವುದು
– ಗ್ರಹಣ ದೋಷವಿರುವ ನಕ್ಷತ್ರ, ರಾಶಿಯವರು ಹೋಮ ಮಾಡಿಸಿ
– ದೋಷ ಪರಿಹಾರಕ್ಕೆ ಗ್ರಹಣ ಶಾಂತಿಹೋಮ ನಡೆಸಿದ್ರೆ ಉತ್ತಮ

Check Also

ಪೆನ್‌ಡ್ರೈವ ಹಂಚಿಕೆ ಪ್ರಕರಣ – ಕೊನೆಗೂ ಅರೆಸ್ಟ್ ಆದ ಸಚಿವ ಜಮೀರ್ ಶಿಷ್ಯ ನವೀನ್, ಚೇತನ್

ಬೆಂಗಳೂರು : ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಆರೋಪದಲ್ಲಿ ಸಚಿವ ಜಮೀರ್ ಶಿಷ್ಯ ನವೀನ್ ಗೌಡ ಹಾಗೂ ಚೇತನ್‌ನನ್ನ …

Leave a Reply

Your email address will not be published. Required fields are marked *

You cannot copy content of this page.