November 21, 2024
WhatsApp Image 2024-11-07 at 6.55.07 PM

ಬೆಂಗಳೂರು: ಕುಡಿದ ಮತ್ತಲ್ಲಿ ವೈದ್ಯ ಹಾಗೂ ನರ್ಸ್ ಸೇರಿ ಆಸ್ಪತ್ರೆಗೆ ಬಂದಿದ್ದ ಯುವತಿಗೆ ನಾಲ್ಕೈದು ಇಂಜೆಕ್ಷನ್ ಕೊಟ್ಟ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ನ.3ರಂದು ಯುವತಿಯೊಬ್ಬಳು ತೀವ್ರ ಜ್ವರದಿಂದ ಆಸ್ಪತ್ರೆಗೆ ಹೋಗಿದ್ದಳು. ಈ ವೇಳೆ ಡಾ.ಪ್ರದೀಪ್ ಹಾಗೂ ನರ್ಸ್ ಮಹೇಂದ್ರ ಕುಡಿದ ಮತ್ತಿನಲ್ಲಿದ್ದರು. ಈ ವೇಳೆ ಯುವತಿಗೆ ಮಹೇಂದ್ರ ಇಂಜೆಕ್ಷನ್‌ ನೀಡಿದ್ದಾನೆ. ಬಳಿಕ ಡಾ.ಪ್ರದೀಪ್‌ನನ್ನು ಕರೆದು ಚಿಕಿತ್ಸೆ ಕೊಡುವಂತೆ ಹೇಳಿದ್ದಾನೆ. ಡಾ.ಪ್ರದೀಪ್ ಇಂಜೆಕ್ಷನ್ ಹಿಡಿದು ಯುವತಿಯ ಮೈಕೈಗೆ 4-5 ಬಾರಿ ಇಂಜೆಕ್ಷನ್ ಚುಚ್ಚಿದ್ದಾರೆ. ಅಲ್ಲದೇ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಇಷ್ಟೆಲ್ಲ ಆಗುತ್ತಿದ್ದಂತೆಯೇ ಸ್ನೇಹಾ ಪೋಷಕರು ಹೆದರಿ, ‘‘ಕುಡಿದು ಬಂದಿದ್ದೀರಾ’’ ಎಂದು ಪ್ರಶ್ನಿಸಿದ್ದರು. ಅಷ್ಟರಲ್ಲಿ ಡಾ. ಪ್ರದೀಪ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.