November 13, 2024
WhatsApp Image 2024-11-08 at 12.44.38 PM

ಮಂಗಳೂರು: ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2021ರಲ್ಲಿ ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯ ಬಳಿ 8ವರ್ಷದ ಬಾಲಕಿಯನ್ನು ಜಯಸಿಂಗ್, ಮುಕೇಶ್ ಸಿಂಗ್, ಮನೀಶ್ ತಿರ್ಕಿ ಮೂವರು ಆರೋಪಿಗಳು ಅತ್ಯಾಚಾರವೆಸಗಿ ಹತ್ಯೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಕ್ಸೊ ಪ್ರಕರಣದಡಿ ಈ ಮೂವರನ್ನು ಬಂಧಿಸಲಾಗಿತ್ತು. ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಪ್ರಕರಣದ ತನಿಖೆ ಕೈಗೊಂಡು ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣದ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಘನ ನ್ಯಾಯಾಲಯದ ನ್ಯಾಯಾದೀಶ ಮಾನು, ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿ ಆದೇಶ ಹೊರಡಿಸಿದೆ.

About The Author

Leave a Reply

Your email address will not be published. Required fields are marked *

You cannot copy content of this page.