ಸುರತ್ಕಲ್ ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, 10 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ
ಮುಕ್ಕ ಕಾಲೇಜಿನ ವಿದ್ಯಾರ್ಥಿಗಳು ತಡರಾತ್ರಿವರೆಗೂ ಜಗಳವಾಡಿಕೊಂಡು ಗದ್ದಲ ಮಾಡುತ್ತಿದ್ದು, ದಿನಕ್ಕೊಬ್ಬರ ಬರ್ತ್ ಡೇ ಸೇರಿದಂತೆ ವಿವಿಧ ಕಾರಣಗಳನ್ನು ಹೇಳಿಕೊಂಡು ರಸ್ತೆಯ ಮಧ್ಯೆ ಪಟಾಕಿ ಹೊಡೆಯುವುದು ಸೇರಿದಂತೆ ವಿವಿಧ ರೀತಿಯಲ್ಲಿ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೂರ ನೀಡಲಾಗಿದೆ
ಯುವಕರು ಮುಕ್ಕ ಪರಿಸರದ ಮನೆಯೊಂದರಲ್ಲಿ ವಾಸವಾಗಿದ್ದು, ಹೊಡೆದಾಡಿ ಕೊಂಡಿದ್ದರು ಎನ್ನಲಾಗಿದೆ. ಹಲ್ಲೆಗೊಳಗಾದ ಓರ್ವ ದೂರು ನೀಡಿರುವ ಪರಿಣಾಮ ಆತನೊಂದಿಗೆ ವಾಸವಾಗಿದ್ದ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂರ ತಿಳಿದು ಬಂದಿದೆ. ವಿದ್ಯಾರ್ಥಿಗಳೆಲ್ಲರೂ ಕೇರಳ ಮೂಲದವರೆಂದು ತಿಳಿದು ಬಂದಿದೆ. ಈ 10 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ