ಮಂಗಳೂರು : ಯುವಕನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬುಧವಾರದಂದು ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿ ಅಡ್ಯಾರ್ ಪದವು ನಿವಾಸಿ ಮುನೀರ್ (27) ಎಂದು ಗುರುತಿಸಲಾಗಿದೆ.
ಮುನೀರ್ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಇವರು ಪರಸ್ಪರ ಪ್ರೀತಿಸುತ್ತಿದ್ದು ಬುಧವಾರ ರಾತ್ರಿ ಮುನೀರ್ ಮಹಿಳೆಯನ್ನು ಭೇಟಿಯಾಗಿದ್ದ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ