ರಾಜ್ಯದ ಜನರೇ ಗಮನಿಸಿ: ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ ಯೋಜನೆಯ ಹೈಲೆಟ್ಸ್ ಇಲ್ಲಿದೆ

ಬೆಂಗಳೂರು : ರಾಜ್ಯ ಸರ್ಕಾರವು ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು ಹೊಸದಾಗಿ ಬಿಡುಗಡೆ ಮಾಡಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು, ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಮರುನಾಮಕರಣ ಮಾಡ ಮಾಡಲಾಗಿದ್ದು, ಇದನ್ನು ಸಿಎಂ ಸಿದ್ದರಾಮಯ್ಯ ಅವರು ಮೊನ್ನೆ ಬಿಡುಗಡೆ ಮಾಡಿದರು.

 

ಯೋಜನೆಯ ಹೈಲೆಟ್ಸ್

* ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ನ್ಯಾಷನಲ್ ಪೊರ್ಟಲ್ ಗೆ ನೂತನ ಹೆಲ್ತ್ ಕಾರ್ಡ್ ಗಳನ್ನ ಸಂಯೋಜನೆಗೊಳಿಸಲಾಗಿದ್ದು, ರಾಜ್ಯದ ಬಿಪಿಎಲ್ ಕಾರ್ಡುದಾರರು ದೇಶದ ಇತರೆ ರಾಜ್ಯಗಳಲ್ಲಿ ಹೆಲ್ತ್ ಕಾರ್ಡ್ ನ ಅಡಿ ಚಿಕಿತ್ಸೆ ಪಡೆಯಬಹುದಾಗಿದೆ.

* ರಾಜ್ಯದಲ್ಲಿರುವ ಒಟ್ಟು5.09 ಕೋಟಿ ಫಲಾನುಭವಿಗಳಿಗೆ ಮುಂದಿನ 6 ತಿಂಗಳ ಒಳಗಾಗಿ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಕಾರ್ಡ್‌ ಸೃಜನೆ ಮತ್ತು ವಿತರಣಾ ಗುರಿಯನ್ನು ಹೊಂದಲಾಗಿದೆ.

* ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರವು ಶೇ 66 ರಷ್ಟು ನೀಡುತ್ತಿದ್ದರೆ, ಕೇಂದ್ರ ಸರ್ಕಾರವು 34% ನೀಡುತ್ತಿದೆ.

* ಯೋಜನೆಯಡಿಯಲ್ಲಿ BPL ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದು.‌

* APL ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, APL ಕುಟುಂಬಗಳಿಗೆ 5 ಲಕ್ಷದ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನ ರಾಜ್ಯ ಸರ್ಕಾರ ಪಾವತಿಸಲಿದೆ. ಎಪಿಎಲ್ ಕಾರ್ಡು ದಾರರು ಶೇ 70 ರಷ್ಟು ಚಿಕಿತ್ಸಾ ವೆಚ್ಚವನ್ನ ಪಾವತಿಸಿದರೆ, ಶೇ 30 ರಷ್ಟು ವೆಚ್ಚವನ್ನ ರಾಜ್ಯ ಸರ್ಕಾರ ಭರಿಸಲಿದೆ.

*
ಪ್ರಸ್ತುತ ರಾಜ್ಯದಲ್ಲಿ 3450 ಕ್ಕೂ ಹೆಚ್ಚಿನ ಆರೋಗ್ಯ ಸಂಸ್ಥೆಗಳು”ಆಯುಷ್ಮಾನ್‌ ಭಾರತ್- “ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಯೋಜನೆಯಲ್ಲಿ ಸೇವೆ ನೀಡಲು ನೊಂದಾಯಿಸಿಕೊಂಡಿರುತ್ತಾರೆ.

* ಸುಮಾರು 1650 ಚಿಕಿತ್ಸಾ ಪ್ಯಾಕೇಜ್‌ಗಳು ರಾಜ್ಯದ ಎಲ್ಲಾ ಸಾರ್ವಜಿಕ ಆಸ್ಪತ್ರೆ ಮತ್ತು 540 ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ.

* 171 ಅತ್ಯಂತ ತುರ್ತು ಚಿಕಿತ್ಸೆಯ ಮತ್ತು ಜೀವ ಉಳಿಸುವ ಪ್ಯಾಕೇಜ್‌ಗಳನ್ನು ಒಳಗೊಂಡಿದೆ.

* ರಾಜ್ಯದಲ್ಲಿ 1.15 ಕೋಟಿ ಬಿಪಿಎಲ್‌ ಕುಟುಂಬಗಳಿದ್ದು, ಇದರಲ್ಲಿ 69 ಲಕ್ಷ SECC 2011 ಸಮೀಕ್ಷೆಯಂತೆ ಬಡತನ ರೇಖೆಗಿಂತ ಕೆಳಗಿವೆ. ಕೇಂದ್ರ ಸರ್ಕಾರ ಈ ಕುಟುಂಬಗಳಿಗೆ 60:40 ಅನುಪಾತದಲ್ಲಿ ಅನುದಾನ ಒದಗಿಸುತ್ತಿದೆ. ರಾಜ್ಯ ಸರ್ಕಾರವು ಉಳಿದ 46 ಲಕ್ಷ ಬಿಪಿಎಲ್‌ ಹಾಗೂ 19 ಲಕ್ಷ ಎಪಿಲ್‌ ಕುಟುಂಬಗಳಿಗೆ 100% ಅನುದಾನ ಒದಗಿಸುತ್ತಿದೆ.

* ಆಯುಷ್ಮಾನ್‌ ಭಾರತ್‌ – ಪ್ರಧಾನ ಮಂತ್ರಿ ಜನಾರೋಗ್ಯ ಯೋಜನಾ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯ Co-branded ಗುರುತಿನ ಚೀಟಿಗಳಾಗಿದ್ದು,
Co-branded ಗುರುತಿನ ಚೀಟಿಗಳನ್ನು ಉಚಿತವಾಗಿ ನೀಡಲಾಗುವುದು.‌

* ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ID (ABHA ID) ಯೊಂದಿಗೆ ಜೋಡಿಸಲಾಗಿರುತ್ತದೆ. ಇದರಿಂದ ಫಲಾನುಭವಿಗಳ ವ್ಯೆದ್ಯಕೀಯ ದಾಖಲೆಗಳನ್ನು ಸಂರಕ್ಷಿಸಿ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ನೆರವಾಗುತ್ತದೆ.

* ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್‌ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರೀಕ ಸೇವಾ “ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಗುರುತಿನ ಚೀಟಿಗಳನ್ನು ಸುಲಭವಾಗಿ ನೊಂದಾಯಿಸಿ ಪಡೆಯಬಹುದಾಗಿರುತ್ತದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.