March 16, 2026
WhatsApp Image 2024-01-09 at 11.46.08 AM

 ಡೆತ್ ನೋಟ್ ಬರೆದಿಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತ್ಯಾಗರಾಜನಗರದಲ್ಲಿ ನಡೆದಿದೆ.

ಮೃತಳನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಝಾನ್ಸಿ ಎಂದು ಗುರುತಿಸಲಾಗಿದೆ, ಕಾಲೇಜಿನಿಂದ ಬಂದವಳೇ ‘ನಾನು ಯಾರಿಗೂ ಮೋಸ ಮಾಡಿಲ್ಲ, ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ ಯೂ’ ಎಂದು ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

 

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದೊಡ್ಡಬಳ್ಳಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

About The Author

Leave a Reply

Your email address will not be published. Required fields are marked *

You cannot copy content of this page.