ಮಂಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ರಂಗೇರುತ್ತಿದೆ. ಈಗಾಗಲೇ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದ್ರೆ, ಇನ್ನು ಕೆಲವು ಕ್ಷೇತ್ರ ಹುಡುಕಾಟದಲ್ಲಿ ತೊಡಗಿದ್ದಾರೆ.
ಈ ಬೆನ್ನಲೇ ರಾಜ್ಯದಲ್ಲಿ ಮತ್ತೆ ಕಮಲ ಅರಳಿಸಲು ಬಿಜೆಪಿ ನಾನಾ ತಂತ್ರ ರೂಪಿಸುತ್ತಿದೆ.
ಹೀಗಾಗಿ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ಕೇಂದ್ರ ನಾಯಕರು ಆಗಾಗ ಕರ್ನಾಟಕ್ಕೆ ಭೇಟಿ ನೀಡುತ್ತಿದ್ದೆ. ಇದೀಗ ಇದೇ ತಿಂಗಳು ಅಂದರೆ ಫೆಬ್ರವರಿ 11ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಪುತ್ತೂರಿಗೆ ಅಮಿತ್ ಶಾ ಭೇಟಿ ನೀಡಲಿದ್ದಾರೆ.
ಈ ವೇಳೆ ಪುತ್ತೂರಿನಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಸುಮಾರು ಒಂದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಸಂಗವಾಗಿ ಸಮಾವೇಶ ನಡೆಯಲಿದೆ.