ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಆತ್ಮಹತ್ಯೆಗೆ ಶರಣು..!

ಮಂಗಳೂರು : ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ವಾಹನ ಚಾಲಕರಾಗಿದ್ದ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಗುರುವಾರ ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅವರ ಪುತ್ರ ಚೇತನ್‌ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Check Also

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ಳಾರೆ ಕೇಂದ್ರ ಮಸ್ಜಿದ್ ನಲ್ಲಿ ಭಯೋತ್ಪಾದನಾ ಚಟುವಟಿಕೆ- ಹಲವಾರು ಅನುಮಾನಗಳಿಗೆ ಕಾರಣವಾದ ಈ ಒಂದು ಪೊಸ್ಟ್..

ಬೆಳ್ಳಾರೆಯ ಝಕರಿಯಾ ಜುಮಾ ಮಸೀದಿ ಮತ್ತು SKSSF ವಿಖಾಯ ಕಾರ್ಯಕರ್ತರಾದ ಅಝರ್ ಮತ್ತು ಜಮಾಲ್ ರವರ ಮೇಲೆ ಸಲಫಿ ನಾಯಕ …

Leave a Reply

Your email address will not be published. Required fields are marked *

You cannot copy content of this page.