

ಕಾರ್ಕಳ: ಪಡುಬಿದ್ರೆ- ಕಾರ್ಕಳ ನಡುವೆ ಹಾಗೂ ಹೋಗಿರುವ ರಾಜ್ಯ ಹೆದ್ದಾರಿ 1ರ ಬೆಳ್ಮಣ್ ಪೇಟೆಯಲ್ಲಿ ಬೃಹತ್ ಗಾತ್ರ ಮರವೊಂದು ರಸ್ತೆಗೆ ಉರುಳಿದ ಪರಿಣಾಮ ಬೈಕ್ ಸವಾರ ಪಿಲಾರು ನಿವಾಸಿ ಪ್ರವೀಣ್(30) ಮೃತಪಟ್ಟಿದ್ದು, ಅವರ ಮನೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆಯವರಿಗೆ ಪರಿಹಾರ ವಿತರಿಸಿದರು.
ಪಡುಬಿದ್ರೆಯ ಕಾಡಿ ಪಟ್ಣದಲ್ಲಿ ಸಮುದ್ರ ಕೊರೆತದ ಪ್ರದೇಶ ವೀಕ್ಷಿಸಿ ಮಾತನಾಡಿದ ಅವರು ಮಳೆಯಿಂದ ಜೀವ ಹಾನಿ, ಮನೆ ಹಾನಿ, ಜಾನುವಾರು ಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸೂಕ್ತ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ತಹಸೀಲ್ದಾರ್ ಶ್ರೀನಿವಾಸ ಕುಲಕರ್ಣಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಕುಮಾರ್ ಶೆಟ್ಟಿ, ಡೇವಿಡ್ ಡಿಸೋಜ ಇನ್ನ, ವಿಶ್ವಾಸ್ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.