July 27, 2025 9:28:35 PM
WhatsApp Image 2025-07-09 at 1.27.00 PM

ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದಲ್ಲಿ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದಲ್ಲಿ ತಯರಾದ “ಧರ್ಮ ಚಾವಡಿ” ತುಳು ಚಿತ್ರ ಜುಲೈ 11 ರಂದು ಬಿಡುಗಡೆಗೊಳ್ಳಲಿದೆ ಎಂದು ಹಿರಿಯ ನಟ ರಮೇಶ್ ರೈ ಕುಕ್ಕುವಳ್ಳಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಚಿತ್ರ ನಿರ್ದೇಶಕ ನಿತಿನ್ ರೈ ಕುಕ್ಕವಳ್ಳಿ ಮಾತಾಡಿ, “ಇದು ನನ್ನ ಎರಡನೇ ಚಿತ್ರ, ಚಿತ್ರದ ಟೀಸರ್ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದು ಮುಂಬೈಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ವೀಕ್ಷಿಸಿದ ಪ್ರೇಕ್ಷಕರು ಸಿನಿಮಾವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಸಿನಿಮಾ ಹೊಸ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಸಾಕಷ್ಟು ಜನರು ಇದು ಧರ್ಮ ದೈವದ ಮುಂದುವರೆದ ಭಾಗ ಎಂದು ಭಾವಿಸಿದ್ದರು, ಆದರೆ ಟೀಸರ್ ಬೇರೆಯೇ ರೀತಿಯಲ್ಲಿದ್ದು ಬಹಳಷ್ಟು ಕುತೂಹಲವನ್ನು ಹುಟ್ಟಿಹಾಕಿದೆ. ಮುಂಬೈ ಮತ್ತು ಪುತ್ತೂರಿನಲ್ಲಿ ನಡೆದ ಪ್ರೀಮಿಯರ್ ನೋಡಿದ ಜನ ಬಹಳಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ“ ಎಂದರು.

ಬಳಿಕ ಮಾತಾಡಿದ ನಟಿ ಧನ್ಯ ಪೂಜಾರಿ ”ಧರ್ಮ ಚಾವಡಿ ನನ್ನ ಮೊದಲ ಚಿತ್ರ. ಈಗಾಗಲೇ ಪ್ರೀಮಿಯರ್ ಶೋ ನೋಡಿದ್ದೇನೆ. ನಾನು ನಿರೀಕ್ಷೆ ಇಟ್ಟಿದ್ದಕ್ಕಿಂತ ಸಿನಿಮಾ ಚೆನ್ನಾಗಿದೆ. ಎಲ್ರು ಸಿನಿಮಾ ನೋಡಿ ಗೆಲ್ಲಿಸಿ“ ಎಂದರು. ಪತ್ರಿಕಾಗೋಷ್ಟಿಯಲ್ಲಿ ಚಿತ್ರ ನಿರ್ಮಾಪಕ ನಡುಬೈಲ್ ಜಗದೀಶ್ ಅಮೀನ್, ಸಂಗೀತ ನಿರ್ದೇಶಕ ಪ್ರಸಾದ್ ಕೆ. ಶೆಟ್ಟಿ, ಅರುಣ್ ರೈ ಪುತ್ತೂರು, ನೇಹಾ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಸಿನಿಮಾ ಕುರಿತು: ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದಲ್ಲಿ ಜಗದೀಶ್ ಅಮೀನ್ ನಡುಬೈಲು ಚಿತ್ರವನ್ನು ನಿರ್ಮಾಣ ಮಾಡಿದ್ದು ಪ್ರಸಾದ್ ಕೆ. ಶೆಟ್ಟಿ ಸಂಗೀತ ನೀಡಿದ್ದಾರೆ. ಶ್ರೀನಾಥ್ ಪವಾರ್ ಸಂಕಲನ ಅರುಣ್ ರೈ ಪುತ್ತೂರು ಛಾಯಾಗ್ರಹಣ ಚಿತ್ರಕ್ಕಿದ್ದು ರಜಾಕ್ ಪುತ್ತೂರು ಚಿತ್ರಕಥೆ ಬರೆದಿದ್ದಾರೆ.

ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ರವಿ ಸ್ನೇಹಿತ್ , ಚೇತನ್ ರೈ ಮಾಣಿ, ಸುರೇಶ್ ರೈ, ಪ್ರಕಾಶ್ ಧರ್ಮ ನಗರ, ದೀಪಕ್ ರೈ ಪಾಣಾಜೆ, ಸುಂದರ್ ರೈ ಮಂದಾರ,ರಂಜನ್ ಬೋಳೂರು, ಮನೀಶ್ ಶೆಟ್ಟಿ ಸಿದ್ದಕಟ್ಟೆ, ರಕ್ಷಣ್ ಮಾಡೂರು, ರೂಪ ಡಿ ಶೆಟ್ಟಿ ಸವಿತಾ ಅಂಚನ್, ಧನ್ಯ ಪೂಜಾರಿ, ನೇಹಾ ಕೋಟ್ಯಾನ್, ನಿಶ್ಮಿತಾ ಶೆಟ್ಟಿ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ಸಚಿನ್ ಉಪ್ಪಿನಂಗಡಿ ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ. ಚಿತ್ರ ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಯ ಎಲ್ಲಾ ಥಿಯೇಟರ್ ಗಳಲ್ಲಿ ಬಿಡುಗಡೆಗೊಳ್ಳಲಿದೆ.

About The Author

Leave a Reply

Your email address will not be published. Required fields are marked *

<p>You cannot copy content of this page.</p>