ಕಾರ್ಕಳ: ಮನನೊಂದು ಮೆಸ್ಕಾಂ ಉದ್ಯೋಗಿ ಆತ್ಮಹತ್ಯೆ..!

ಕಾರ್ಕಳ: ಅಣ್ಣನ ಸಾವಿನಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾದ ಕೇಪುಲ ಎಂಬಲ್ಲಿ ಸಂಭವಿಸಿದೆ.

ನಿಶಾ (23) ಆತ್ಮಹತ್ಯೆ ಮಾಡಿಕೊಂಡ ಯುವತಿ. ನಿಶಾ, ಮನೆ ಸಮೀಪದ ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರು ತಿಂಗಳ ಹಿಂದೆ ನಿಶಾ ಅಣ್ಣ ಆತ್ಮಹತ್ಯೆಗೆ ಶರಣಾಗಿದ್ದರು. ಇದೇ ನೋವಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ನಿಶಾ, ನಿಟ್ಟೆಯ ಮೆಸ್ಕಾಂ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.