ಮಂಗಳೂರು : ಮಂಗಳೂರಿನಲ್ಲಿ ಮತ್ತೆ ಮರಳು ದಂಧೆಕೋರರ ಹಾವಳಿ ಹೆಚ್ಚಾಗಿದ್ದು, ಇದೀಗ ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದೆ.
ಅಕ್ರಮ ಮರಳು ದಂಧೆಕೊರರ ಅಟ್ಟಹಾಸ ಹೆಚ್ಚಾದ ಹಿನ್ನಲೆ ದಕ್ಷಿಣಕನ್ನಡ ಜಿಲ್ಲಾಡಳಿತ. ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿಟಿವಿ ಆಳವಡಿಸಿತ್ತು. ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಗುದ್ದಿ ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್ ಮಾಡಲಾಗಿತ್ತು.
ಇದೀಗ ಮತ್ತೆ ನಸುಕಿನ ಜಾವ 2.25 ರ ಸುಮಾರಿಗೆ ಕಾರಿನಲ್ಲಿ ಬಂದ ತಂಡದಲ್ಲಿ ಇದ್ದವರಲ್ಲಿ ಒಬ್ಬ ಕೆಳಗಿಳಿದು ಅಕ್ರಮ ಮರಳುಗಾರಿಕೆ ತಡೆಗಟ್ಟಲು ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿದ್ದಾನೆ. ಈ ಕುರಿತು ಉಳ್ಳಾಲದ ಗ್ರಾಮಲೆಕ್ಕಾಧಿಕಾರಿ ಸಂತೋಷ್ ಎಂಬವರು ನೀಡಿದ ದೂರಿನಡಿ ಪ್ರಕರಣ ದಾಖಲಾಗಿದೆ.