ಬೆಂಗಳೂರು: ಹಿಂದೂ ಪದದ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಂತ ಹೇಳಿಕೆ ಬಗ್ಗೆ ಬಿಜೆಪಿ ಸೇರಿದಂತೆ ಜೆಡಿಎಸ್ ನಿಂದಲೂ ವ್ಯಾಪಕ ವಿರೋಧ, ಆಕ್ಷೇಪ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ.
ಜೊತೆಗೆ ಜನತೆಯಲ್ಲಿ ವಿಷಾದವನ್ನು ವ್ಯಕ್ತ ಪಡಿಸಿದ್ದಾರೆ.
ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು ಹಿಂದೂ ಪದದ ಬಗ್ಗೆ ತಾವು ಹೇಳಿದ್ದಂತ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಈ ಹೇಳಿಕೆಯಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೇ ವಿಷಾಧಿಸುತ್ತೇನೆ ಎಂದಿದ್ದಾರೆ.
ಇನ್ನೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಯ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರವನ್ನು ಬರೆದಿದ್ದಾರೆ. ಆ ಪತ್ರದಲ್ಲಿ ತಮ್ಮ ಹೇಳಿಕೆಯಲ್ಲಿ ತಪ್ಪು ಇದೆಯಾ ಎನ್ನುವ ಬಗ್ಗೆ ತನಿಖೆ ನಡೆಸುವಂತೆಯೂ ಕೋರಿದ್ದಾರೆ.
ಅಂದಹಾಗೇ ನವೆಂಬರ್ 6ರಂದು ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆಯಲ್ಲಿ ನಡೆದಂತ ಕಾರ್ಯಕ್ರಮದಲ್ಲಿ ಹಿಂದೂ ಪದದ ಬಗ್ಗೆ ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಂತ ಹೇಳಿಕೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ಇಂತಹ ಹೇಳಿಕೆಯನ್ನು ವಾಪಾಸ್ ಪಡೆದಿದ್ದಾರೆ.