March 15, 2026
WhatsApp Image 2023-11-09 at 9.00.01 AM

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಂದ ಕೋಟಿ ಕೋಟಿ ಹಣ ಪಡೆದು, ವಂಚನೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವಂತ ಅಭಿನವ ಹಾಲಶ್ರೀಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಆರೋಪದಲ್ಲಿ ಚೈತ್ರಾ ಅಂಡ್ ಟೀಂ ಅನ್ನು ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಈ ಪ್ರಕರಣದಲ್ಲಿ ಜೈಲು ಸೇರಿದ್ದಂತ ಅಭಿನವ ಹಾಲಶ್ರೀ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇಂದು ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠದಲ್ಲಿ ಅಭಿನವ ಹಾಲಶ್ರೀ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಲಾಯಿತು. ಈ ಬಳಿಕ ಅಭಿನವ ಹಾಲಶ್ರೀಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಭಿನವ ಹಾಲಶ್ರೀಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.