ಉಡುಪಿ: ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಕನ್ನಡ ಚಿತ್ರರಂಗದ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಉಡುಪಿಗೆ ಆಗಮಿಸಿ ಕೃಷ್ಣನ ದರ್ಶನ ಪಡೆದು ಕಾಣಿಯೂರು ಮಠಾಧೀಶರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು.
ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡ ಸ್ಯಾಂಡಲ್‌ವುಡ್ ಕ್ಯೂಟ್ ಜೋಡಿ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.
ಕೃಷ್ಣ ಮಠದ ಕನಕ ನವಗ್ರಹ ಕಿಂಡಿ ಮೂಲಕ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದರು. ಬಳಿಕ ಕೃಷ್ಣ ಮಠದ ರಥಬೀದಿಯಲ್ಲಿ ಇರುವ ಕಾಣಿಯೂರು ಮಠಕ್ಕೆ ಭೇಟಿ ನೀಡಿ, ಕಾಣಿಯೂರು ಮಠಾಧೀಶ ವಿದ್ಯಾವಲ್ಲಭ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು.
ಈ ವೇಳೆ ಕಾಣಿಯೂರು ಶ್ರೀಗಳು ನವ ಜೋಡಿಗೆ ಮಠದ ವತಿಯಿಂದ ಗೌರವ ಸಲ್ಲಿಸಿದರು.