December 21, 2024
n45002157216705616449439b52b08bc5140ac8ac2bdffb43879ed6e902f1010f5665af5dd69ed23e3a55b6

ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ.3ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಗುರುವಾರ ಮೃತಪಟ್ಟಿದ್ದಾರೆ.

ಬೆಂಗಳೂರಿನ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿರುವ ಮೆಗಾ ರಂಜಿತ್ ಪೈ (34) ಮೃತಪಟ್ಟ ದುರ್ದೈವಿ.

ಡಿ.3ರಂದು ಸಂಜೆ 6.35ಕ್ಕೆ ಕೊಟ್ಟಾರ ಚೌಕಿಯ ಬಳಿ ರಸ್ತೆ ದಾಟುತ್ತಿದ್ದಾಗ ಬಸ್ ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಮೆಗಾ ರಂಜಿತ್ ಪೈ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇವರು ಸಾವನ್ನಪ್ಪಿದ್ದಾರೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಇವರು ಮಂಗಳೂರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಬಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಚಾರ ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.