ನವದೆಹಲಿ : ಮದುವೆಗೆ ಮುಂಚೆನೆ ಮಗುವಿಗೆ ಜನ್ಮ ನೀಡಿದ 20 ರ ಹರೆಯದ ಯುವತಿ ಮಗುವನ್ನು ಅಪಾರ್ಟ್ ಮೆಂಟ್ ನ ಬಾತ್ ರೂಮ್ ಕಿಟಕಿಯಿಂದ ಎಸೆದ ಘಟನೆ ದೆಹಲಿಯಲ್ಲಿ ನಡೆದಿದ್ದು, ಘಟನೆಯಲ್ಲಿ ಮಗು ಸಾವನಪ್ಪಿದೆ.
ನೋಯ್ಡಾದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಯುವತಿ, ಸೋಮವಾರ ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ ಮದುವೆಯಾಗದೇ ಮಗು ಹೆತ್ತ ಹಿನ್ನಲೆ ಸಾಮಾಜಿಕ ಕಳಂಕಕ್ಕೆ ಹೆದರಿ ಮಗುವನ್ನು ತಾನು ವಾಸಿಸುತ್ತಿದ್ದ ಜೈ ಅಂಬೆ ಅಪಾರ್ಟ್ಮೆಂಟ್‌ನ ಬಾತ್‌ರೂಮ್ ಕಿಟಕಿಯಿಂದ ಎಸೆದು ಕೊಂದಿದ್ದಾಳೆ.
ಮಗು ರಸ್ತೆಯಲ್ಲಿ ಬಿದ್ದಿದ್ದನ್ನು ಕಂಡು ಸ್ಥಳೀಯರು ನೋಯ್ಡಾದ ಮೆಟ್ರೋ ಆಸ್ಪತ್ರೆಗೆಕರೆದೊಯ್ದರು, ಹೆಚ್ಚಿನ ಚಿಕಿತ್ಸೆಗಾಗಿ ಎಲ್‌ಬಿಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಷ್ಟರಲ್ಲಿ ಮಗು ಮೃತಪಟ್ಟಿದ್ದು. ನಂತರ ಶಿಶು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸ್ ಉಪ ಆಯುಕ್ತ (ಪೂರ್ವ) ಅಮೃತ ಗುಗುಲೋತ್, ರಕ್ತದ ಕಲೆಗಳ ಜಾಡು ಹಿಡಿದು ಆರೋಪಿ ಯುವತಿಯನ್ನ ಬಂಧಿಸುವಲ್ಲಿ ಯಶಸ್ವಿಯಾದರು.