ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿಯ ಮುಸುಕುದಾರಿಗಳಿಂದ ಕಿಡ್ನ್ಯಾಪ್ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತ್ತಿದೆ.
ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು.
ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿ ಸ್ಕೂಟರ್ ನಲ್ಲಿ ಪ್ರಯಾಣ ಮಾಡುವಾಗ ಓಮಿನಿ ಕಾರಿನಲ್ಲಿ ಬಂದ ಮೂವರು ಅಪರಿಚಿತರು ಕಿಡ್ನಾಪ್ ಮಾಡಲು ಯತ್ನಿಸಿ ಚೂರಿ ಇರಿದು ಪರಾರಿಯಾಗಿದ್ದರು ಎಂದು ವಿದ್ಯಾರ್ಥಿನಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿ ದೂರು ನೀಡಿದ್ದರು.
ಈ ಗಂಭೀರ ಪ್ರಕರಣದ ಬೆನ್ನುಹತ್ತಿದ ಪೊಲೀಸರಿಗೆ ಇದೀಗ ಶಾಕ್ ಆಗಿದೆ. ವಿದ್ಯಾರ್ಥಿನಿ ಕಾಲೇಜಿಗೆ ತೆರಳಲು ಇಷ್ಟವಿಲ್ಲದ ಕಾರಣ ಕಿಡ್ನ್ಯಾಪ್ ಯತ್ನದ ಡ್ರಾಮ ಮಾಡಿರುವುದಾಗಿ ಪೊಲೀಸರಿಗೆ ಗೊತ್ತಾಗಿದೆ. ಪ್ರಕರಣ ಇದೀಗ ಸುಖಾಂತ್ಯ ಕಂಡಿದ್ದು, ಇಡೀ ಬೆಳ್ತಂಗಡಿಯ ಜನ ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ
ಖತರ್ನಾಕ್ ಐಡಿಯಾ!
ಕಾಲೇಜಿಗೆ ಹೋಗೋಕು ಮುನ್ನ ವಿದ್ಯಾರ್ಥಿನಿ ಪುಸ್ತಕಗಳನ್ನು ಮನೆಯಲ್ಲಿ ಸುಟ್ಟು ಹಾಕಿದ್ದಾಳೆ. ಬಳಿಕ ಬ್ಯಾಗ್ ಅನ್ನು ದಾರಿಯಲ್ಲೇ ಬಿಸಾಕಿದ್ದಾಳೆ. ರಸ್ತೆ ಬದಿಯಲ್ಲಿ ಸ್ಕೂಟಿಯನ್ನು ನಿಲ್ಲಿಸಿದ್ದಾಳೆ. ಬಳಿಕ ಕಿಡ್ನ್ಯಾಪ್ ನಾಟಕ ಮಾಡಿದ್ದಾಳೆ. ಘಟನೆ ನಡೆದ ಬಳಿಕ ಶಾಸಕ ಹರೀಶ್ ಪೂಂಜಾ ಬಾಲಕಿಯನ್ನ ಭೇಟಿಯಾಗಿದ್ದಾರೆ.
ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರಿನಿಂದ ದೌಡಾಸಿದ್ದರು. ತನಿಖೆ ಮೇಲೆ ತನಿಖೆ ನಡೆಸಿದ್ದು, ಕೊನೆಗೆ ಪೊಲೀಸರ ಮುಂದೆ ವಿದ್ಯಾರ್ಥಿನಿ ಬಾಯಿಬಿಟ್ಟಿದ್ದಾಳೆ. ಮನೆಯವರು ಮಂಗಳೂರು ಕಾಲೇಜಿಗೆ ಸೇರಿಸುತ್ತಾರೆ ಎಂದು ಈ ರೀತಿ ನಾಟಕ ಮಾಡಿದ್ದೇನೆ ಎಂದು ಸತ್ಯ ಒಪ್ಪಿಕೊಂಡಿದ್ದಾಳೆ, ಬೇರೆ ಯಾವುದೇ ಉದ್ದೇಶಕ್ಕೆ ಈ ರೀತಿ ಮಾಡಿಲ್ಲ ಎಂದು ತಿಳಿದು ಬಂದಿದೆ.