ಟೊಮೆಟೋ ಕಾಯಲು ಅಂಗಡಿ ಬಳಿ ಇಬ್ಬರು ಬೌನ್ಸರ್ ಗಳನ್ನು ನೇಮಿಸಿದ ತರಕಾರಿ ವ್ಯಾಪಾರಿ

ಟೊಮ್ಯಾಟೊ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ರಾತ್ರೋರಾತ್ರಿ ಟೊಮ್ಯಾಟೊ ಕದ್ದೊಯ್ಯುತ್ತಿದ್ದಾರೆ. ಹೀಗಾಗಿ ತರಕಾರಿ ವ್ಯಾಪಾರಿ ಟೊಮೆಟೋ ಕಾಯಲು ಇಬ್ಬರು ಬೌನ್ಸರ್ ಗಳನ್ನು ನೇಮಿಸಿ ಸುದ್ದಿಯಾಗಿದ್ದಾನೆ.

ಈ ಕುರಿತ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.

ಉತ್ತರ ಪ್ರದೇಶದ ವಾರಣಸಿಯ ತರಕಾರಿ ವ್ಯಾಪಾರಿ ಅಜಯ್ ಫೌಜಿ ಟೊಮ್ಯಾಟೊ ಕಾಯಲು ಇಬ್ಬರು ಬೌನ್ಸರ್ ನೇಮಿಸಿದ್ದಾರೆ.

ಟೊಮ್ಯಾಟೊ ಬೆಲೆ ಗಗನಕ್ಕೇರಿದೆ.ಹಲವೆಡೆ ಟೊಮ್ಯಾಟೊ ಕಳ್ಳತನ ನಡೆದಿವೆ.ಹೀಗಾಗಿ ಈ ಸಮಸ್ಯೆ ಇಲ್ಲಿ ಆಗಬಾರದು ಎಂದು ಇಬ್ಬರು ಬೌನ್ಸರ್ ನೇಮಕ ಮಾಡಿದ್ದೇನೆ ಎಂದು ಅಜಯ್ ಫೌಜಿ ಹೇಳಿದ್ದಾರೆ.

ಟೊಮ್ಯಾಟೊ ಪಕ್ಕದಲ್ಲೇ ನಿಂತುಕೊಂಡಿರುವ ಇಬ್ಬರು ಬೌನ್ಸರ್ ಗ್ರಾಹಕರನ್ನು ಎಚ್ಚರಿಸುತ್ತಿದ್ದಾರೆ. ಈ ಕುರಿತ ವಿಡಿಯೋ ನೋಡಿದ ನೆಟ್ಟಿಗರು ವಿಭಿನ್ನವಾಗಿ ಕಮೆಂಟ್​ ಮಾಡುತ್ತಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.