ಕುಂದಾಪುರ: ಬಸ್ಸಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಲಾರಿ;ಓರ್ವ ವಿದ್ಯಾರ್ಥಿ ಗಂಭೀರ;ಹಲವರಿಗೆ ಗಾಯ

ಕುಂದಾಪುರ: ಖಾಸಗಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ರಭಸವಾಗಿ ಬಂದು ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರಿನ ಪ್ರವಾಸಿ ಹೋಟೆಲ್ ಎದುರು ಆ.10ರ ಶನಿವಾರ ಬೆಳಗ್ಗೆ ಸಂಭವಿಸಿದೆ.

ಅಪಘಾತದ ಪರಿಣಾಮ ಬಸ್ಸಿಲ್ಲಿದ್ದ ಓರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದು, 7-8 ಮಂದಿ ವಿದ್ಯಾರ್ಥಿಗಳ ಸಹಿತ ಹಲವರಿಗೆ ಗಾಯವಾಗಿದೆ.

ಲಾರಿಯ ಚಾಲಕ, ನಿರ್ವಾಹಕ ಕೂಡಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಬೈಂದೂರಿಂದ ಕುಂದಾಪುರಕ್ಕೆ ಬರುತ್ತಿತ್ತು. ಅಪಘಾತದ ತೀವ್ರತೆಗೆ ಬಸ್ಸಿನ ಹಿಂಬದಿ ಹಾಗೂ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದೆ.

ಕುಂದಾಪುರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡಿದ್ದಾರೆ‌.

Check Also

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣವನ್ನೆ ತೆತ್ತ ಅರ್ಚನಾ ಕಾಮತ್…!!

ಮಂಗಳೂರು : ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಮಹಿಳೆಯೊಬ್ಬರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು …

Leave a Reply

Your email address will not be published. Required fields are marked *

You cannot copy content of this page.