ಮಂಗಳೂರು : ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವೈದ್ಯೆಗೆ ಗುಪ್ತಾಂಗ ತೋರಿಸಿದ ಬಸ್ ಕ್ಲೀನರ್ ನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ ಕೆಂಜಾರು ನಿವಾಸಿ ಮಹಮ್ಮದ್ ಇಮ್ರಾನ್(26) ಎಂದು ಗುರುತಿಸಲಾಗಿದೆ.
ಮಂಗಳೂರಿನಲ್ಲಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಬಸ್ ಇಂದು ಮುಂಜಾನೆ ಉಳ್ಳಾಲ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಮಹಮ್ಮದ್ ಇಮ್ರಾನ್ ತನ್ನ ಪ್ಯಾಂಟ್ ಜಿಪ್ ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಬಗ್ಗೆ ಮಹಿಳಾ ವೈದ್ಯೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿ ಇಮ್ರಾನನ್ನು ಬಂಧಿಸಿದ್ದಾರೆ.