ಕಾರ್ಕಳ: ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಬಜೆಗೋಲಿ ಸಮೀಪದ ನೆಲ್ಲಿಕಾರು ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ
ಮೃತರನ್ನು ಆಂಧ್ರಪ್ರದೇಶ ಮೂಲದ ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ (32) ಹಾಗೂ ಎರಡು ವರ್ಷದ ಮಗು ಎಂದು ಗುರುತಿಸಲಾಗಿದೆ
ಇವರು ತೀರ್ಥಕ್ಷೇತ್ರವಾದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದು ಪರಿಶೀಲ ನಡೆಸಿದ್ದಾರೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.