December 23, 2024
WhatsApp Image 2022-12-10 at 9.13.28 AM

ಪ್ಯಾರಿಸ್: ಲೈಂಗಿಕವಾಗಿ ಹರಡುವ ರೋಗಗಳನ್ನು ತಡೆಗಟ್ಟಲು ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮಾಸ್ಟರ್‌ ಪ್ಲ್ಯಾನ್‌ ಮಾಡಿದ್ದು, ಮುಂದಿನ ವರ್ಷದಿಂದ ಔಷಧಾಲಯಗಳಲ್ಲಿ ʻ18-25 ವರ್ಷದʼ ಒಳಗಿನ ಯುವಜನರಿಗೆ ʻಉಚಿತ ಕಾಂಡೋಮ್‌ʼ ನೀಡಲು ಮುಂದಾಗಿದ್ದಾರೆ

ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಔಷಧಾಲಯಗಳಲ್ಲಿ ಜನವರಿ 1 ರಿಂದ 18 ರಿಂದ 25 ವರ್ಷ ವಯಸ್ಸಿನವರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಪ್ರಕಟನೆಯನ್ನು ಹೊರಡಿಸಿದ್ದಾರೆ. ಫ್ರಾನ್ಸ್‌ನಲ್ಲಿ 2020 ಮತ್ತು 2021 ರಲ್ಲಿ ಎಸ್‌ಟಿಡಿ ಹರಡುವ ಪ್ರಮಾಣ ಶೇ.30 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಅಂದಾಜಿಸಿದ್ದಾರೆ. ಮುಂದಿನ ವರ್ಷದಿಂದ ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ ಮಾಡಲು ನಿರ್ಧಾರ ತೆಗೆದುಕೊಂಡಿದ್ದಾರೆ ಎಚ್ಚರಿಕೆ ದೃಷ್ಟಿಯಿಂದ ಈ ನಿರ್ಧಾರಕ್ಕೆ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮುಂದಾಗಿದ್ದಾರೆ

About The Author

Leave a Reply

Your email address will not be published. Required fields are marked *

You cannot copy content of this page.