ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಜಂಕ್ಷನ್ ನಲ್ಲಿ ಪ್ರತಿದಿನ ಅಪಘಾತ ಸಂಭವಿಸುತ್ತಿದೆ. ಕಳೆದ ಒಂದು ತಿಂಗಳಲ್ಲಿ ಇಲ್ಲಿ ಹಲವು ಜೀವಗಳು ಅಪಘಾತಕ್ಕೆ ಬಲಿಯಾಗಿವೆ. ಅವೈಜ್ಞಾನಿಕ ರಸ್ತೆ ನಿರ್ಮಾಣ ಒಂದೆಡೆಯಾದರೆ, ವಾಹನ ಸವಾರರು ಸಂಚಾರಿ ನಿಯಮಗಳನ್ನು ಪಾಲಿಸದೇ ಇರುವುದೂ ಅಪಘಾತಗಳಿಗೆ ಕಾರಣವಾಗುತ್ತಿವೆ. ಇವತ್ತು ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮವಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಸೂಚನಾ ಫಲಕವನ್ನು ಕಟಪಾಡಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಅಳವಡಿಸಲಾಯಿತು. ಕಾಪು ವೃತ್ತ ನಿರೀಕ್ಷಕರಾದ ಪೂವಯ್ಯ, ಕಾಪು ಠಾಣಾಧಿಕಾರಿ ಶ್ರೀಶೈಲ ಮುರಗೋಡ ಮತ್ತು ಕಟಪಾಡಿ ಉಪ ಠಾಣಾ ಸಿಬ್ಬಂದಿ ರುಕ್ಮಯ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Check Also
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್ ಎಗರಿಸಿ ಪರಾರಿಯಾಗಿರುವ …