![WhatsApp Image 2023-01-11 at 10.59.11 AM](https://i0.wp.com/thrishulnews.com/wp-content/uploads/2023/01/WhatsApp-Image-2023-01-11-at-10.59.11-AM.jpeg?fit=750%2C490&ssl=1?v=1673414971)
![](https://i0.wp.com/thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg?fit=1050%2C600&ssl=1)
ಬೆಂಗಳೂರು: ಐಟಿಸಿಟಿ ಬೆಂಗಳೂರಿನಲ್ಲಿ ಕೋಲಾರದ ಬಾಡಿ ಬಿಲ್ಡರ್ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬಾಡಿ ಬಿಲ್ಡರ್ ಎಂದು ಗುರುತಿಸಲಾಗಿದೆ.
ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್, ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಫಾರ್ಮಾ ಡಿ ಓದುತ್ತಿದ್ದರು. ಜೊತೆಗೆ ದೇಹದಾರ್ಢ್ಯ ಸ್ಪರ್ಧೆಗಳಲ್ಲೂ ಭಾಗಿಯಾಗುತ್ತಿದ್ದರು. ಆದರೆ ತಾವು ವಾಸವಿದ್ದ ಕೊಠಡಿಯಲ್ಲಿ ಮಂಗಳವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ದೊರೆತಿದ್ದಾರೆ.
ಈ ಘಟನೆ ಸಂಬಂಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಈ ಘಟನೆಯ ಸಂಬಂಧ ಪೊಲೀಸರು ತನಿಖೆ ಚುರುಕುಗೊಂಡಿದೆ. ಈವರೆಗೆ ಸಾವಿಗೆ ಯಾವುದೇ ಪ್ರಮುಖ ಕಾರಣಗಳು ಪತ್ತೆಯಾಗಿಲ್ಲ.