

ಉಡುಪಿ: ತೀವ್ರ ಜ್ವರದ ಕಾರಣ ಎರಡು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.
ಉಪ್ಪುಂದ ಗ್ರಾಮ ಬೈಂದೂರು ತಾಲೂಕು ಉಡುಪಿ ಇಲ್ಲಿನ ಹೆಣ್ಣು ಮಗುವಾದ ಪ್ರನ್ವಿತಾಳಿಗೆ (ಎರಡುವರೆ ತಿಂಗಳು) ದಿನಾಂಕ 09/04/2025 ರಂದು ಜ್ವರ ಬಂದಿದ್ದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿದ್ದು ಜ್ವರ ಕಡಿಮೆಯಾಗಿದೆ.
ಮಾರ್ಚ್ 10 ರಂದು ಮಗುವಿಗೆ ಮತ್ತೆ ಜ್ವರ ಕಾಣಿಸಿಕೊಂಡಿದ್ದು ಮಗುವನ್ನು ಉಪ್ಪುಂದದ ಆರಾಧ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು ಅದರಂತೆ ಬೈಂದೂರು ಸರ್ಕಾರಿ ಆಸ್ಪತ್ರೆಗೆ ಕರೆ ತಂದಲ್ಲಿ ಪರೀಕ್ಷಿಸಿದ ವೈದ್ಯರು ಸುಮಾರು ಬೆಳಿಗ್ಗೆ11:10 ಗಂಟೆಗೆ ಈಗಾಗಲೇ ಮಗು ಮೃತ ಪಟ್ಟಿರುವುದಾಗಿ ತಿಳಿಸಿರುವುದಾಗಿದೆ.
ಈ ಬಗ್ಗೆ ಬೈಂದೂರು ಪೊಲೀಸ್ ಠಾಣಾ ಯು.ಡಿ.ಆರ್ ಕ್ರಮಾಂಕ 20/2025 ಕಲಂ: 194 BNSS ರಂತೆ ಪ್ರಕರಣ ದಾಖಲಾಗಿರುತ್ತದೆ.”