March 21, 2026
WhatsApp Image 2024-05-11 at 10.21.30 AM

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು ಆರೋಪಿ ವಿದ್ಯಾರ್ಥಿನಿ ಮೀನಾ (16) ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಇದೀಗ ಆರೋಪಿ ಪ್ರಕಾಶ್ (32) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸ್ವಗ್ರಾಮ ಹಮ್ಮಿಯಾಲದಲ್ಲೇ ಈತನ ಬಂಧನವಾಗಿದೆ ಎಂದು ತಿಳಿದು ಬಂದಿದೆ.

ಗುರುವಾರ ಸಂಜೆ ಮೀನಾಳ ತಂದೆ, ತಾಯಿ ಮೇಲೆ ಹಲ್ಲೆ ಮಾಡಿ, ನಂತರ ಮೀನಾಳನ್ನು ಸ್ವಲ್ಪ ದೂರ ಎಳೆದೊಯ್ದು ತಲೆಯನ್ನು ಕತ್ತರಿಸಿ ಪರಾರಿಯಾಗಿದ್ದ. ಪೊಲೀಸರು ಆರೋಪಿಯ ಶೋಧ ಕಾರ್ಯ ತೀವ್ರಗೊಳಿಸಿದ ಹಂತದಲ್ಲೇ ಶುಕ್ರವಾರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವ್ಯಾಪಕ ಊಹಾಪೋಹಗಳು ಹಬ್ಬಿತ್ತು. ಆದರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಈ ಸುದ್ದಿಯನ್ನು ಅಲ್ಲಗಳೆದಿದ್ದರು. ಇದೀಗ ಆರೋಪಿಯ ಬಂಧನವಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ ಎಂದು ಎಸ್‌ಪಿ ಇಂದು ಬೆಳಗ್ಗೆ ಮಾಹಿತಿ ನೀಡಿದ್ದಾರೆ. ವಿಚಾರಣೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿಯನ್ನು ಮಧ್ಯಾಹ್ನದ ವೇಳೆಗೆ ನೀಡುವುದಾಗಿ ತಿಳಿಸಿದ್ದಾರೆ.

 

About The Author

Leave a Reply

Your email address will not be published. Required fields are marked *

You cannot copy content of this page.