May 11, 2026
WhatsApp Image 2026-05-11 at 9.17.03 AM

ಕಾರ್ಕಳ: ಇಲ್ಲಿನ ಕುಕ್ಕುಂದೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿರುವ ಬಾವಿಯ ಹೂಳು ಮತ್ತು ಮಣ್ಣು ತೆಗೆಯುವ ಕೆಲಸದಲ್ಲಿ ನಿರತರಾಗಿದ್ದ ಮೂವರು ಕಾರ್ಮಿಕರು ಭಾನುವಾರ ಬೆಳಗ್ಗೆ ಬಾವಿಯೊಳಗೆ ಸಿಲುಕಿಕೊಂಡ ಘಟನೆ ನಡೆದಿದೆ.

ಬಾವಿಯೊಳಗೆ ಸಿಲುಕಿಕೊಂಡಿದ್ದವರನ್ನು ರಾಜೇಶ್ (42), ಪವನ್ (29), ಗೋಪಾಲ್ ನಾಯ್ಕ್ (52) ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಗ್ಗೆ ಕಾರ್ಮಿಕರು ಬಾವಿ ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾಗ ಈ ಅವಘಡ ಸಂಭವಿಸಿದೆ. ಬೆಳಗ್ಗೆ ಸುಮಾರು 10.30ರ ಸುಮಾರಿಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಕಾರ್ಕಳ ಅಗ್ನಿಶಾಮಕ ಮತ್ತು ತುರ್ತು ಸೇವಾ ಘಟಕದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯವನ್ನು ಆರಂಭಿಸಿದರು.

ಅಗ್ನಿಶಾಮಕ ದಳದ ತಂಡವು ಬಾವಿಯೊಳಗೆ ಸಿಲುಕಿದ್ದ ಮೂವರನ್ನೂ ಸುರಕ್ಷಿತವಾಗಿ ಮೇಲೆತ್ತಲು ಯಶಸ್ವಿಯಾಗಿದೆ. ರಕ್ಷಿಸಲ್ಪಟ್ಟ ಈ ಕಾರ್ಮಿಕರನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿಶಾಮಕ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು. ತಂಡದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಾದ ರೂಪೇಶ್, ಸುರೇಶ್, ದಿನೇಶ್, ಗಣೇಶ್, ನಿತ್ಯಾನಂದ ಮತ್ತು ಚಾಲಕ ಮುಜಾಮಿಲ್ ಪಾಲ್ಗೊಂಡಿದ್ದರು.

About The Author

Leave a Reply

Your email address will not be published. Required fields are marked *

You cannot copy content of this page.