ಕೋಟ: ಖ್ಯಾತ ವೈದ್ಯ, ಕುಂದಾಪುರ ಶ್ರೀಮಾತಾ ಆಸ್ಪತ್ರೆಯ ಡಾ.ಸತೀಶ ಪೂಜಾರಿ ನಿಧನ

ಕೋಟ: ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ, ಖ್ಯಾತ ಇ.ಎನ್.ಟಿ. ತಜ್ಞ ಡಾ.ಸತೀಶ ಪೂಜಾರಿ ಸಾಸ್ತಾನ (52) ಅವರು ಜು.11.ಗುರುವಾರ ಹೃದಯಾಘಾತದಿಂದ ಕೋಟ ಮಣೂರು ಸ್ವಗೃಹದಲ್ಲಿ ನಿಧನರಾದರು.

ಮೃತರು, ಪತ್ನಿ, ಪುತ್ರನನ್ನು ಅಗಲಿದ್ದಾರೆ. ಇವರು ಕುಂದಾಪುರ ಶ್ರೀಮಾತಾ ಆಸ್ಪತ್ರೆ, ಕೋಟ ಮನಸ್ಮಿತಾ ಫೌಂಡೇಶನ್ ಮೊದಲಾದ ಸಂಸ್ಥೆಗಳ ಆಡಳಿತ ಪಾಲುದಾರರಾಗಿದ್ದರು.

ಹವ್ಯಾಸಿ ಗಾಯಕರಾಗಿದ್ದ ಇವರು ಹಲವಾರು ಆಲ್ಬಂ ಸಾಂಗ್ ಗಳಿಗೆ, ಭಕ್ತಿಗೀತೆಗಳಿಗೆ ಧ್ವನಿಯಾಗಿದ್ದರು. ಸಂಗೀತ ರಸಮಂಜರಿಗಳಲ್ಲೂ ಕಾರ್ಯಕ್ರಮ ನೀಡಿದ್ದಾರೆ.

ಡಾ. ಎಸ್. ಜಾನಕಿ ಅವರ ಕಟ್ಟಾ ಅಭಿಮಾನಿಯಾಗಿ ಪ್ರತಿ ವರ್ಷ ಕೋಟೇಶ್ವರದಲ್ಲಿ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಆಯೋಜಿಸಿ ನಾಡಿನ ಹಲವು ಮಂದಿ ಗಣ್ಯ ಹಾಡುಗಾರರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದರು. ಮನಸ್ಮಿತಾ ಫೌಂಡೇಶನ್ ಮೂಲಕ ಸಮಾಜ ಸೇವೆಯಲ್ಲೂ ತೊಡಗಿಕೊಂಡಿದ್ದರು.

ಇಂದು ಸಂಜೆ 4.30 ರಿಂದ ಮೃತರ ಸ್ವಗೃಹ ಕೋಟ ಮಣೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

Check Also

ನಾಳೆ (ಜು.20) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ …

Leave a Reply

Your email address will not be published. Required fields are marked *

You cannot copy content of this page.