ಬೆಳ್ತಂಗಡಿ : ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಅಟೋ ರಿಕ್ಷಾವೊಂದು ಮಗುಚಿ ಬಿದ್ದು ಒಂಬತ್ತು ವಿದ್ಯಾರ್ಥಿಗಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮೂರುಗೋಳಿಯಲ್ಲಿ ಇಂದು ಸಂಭವಿಸಿದೆ.
ಕಲ್ಲೇರಿ ಆಸುಪಾಸಿನಿಂದ ಮೂಡಡ್ಕದ ಅಲ್ ಮದೀನಾತುಲ್ ಮುನಾವರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಬರುತ್ತಿದ್ದ ಅಟೋ ರಿಕ್ಷಾಕ್ಕೆ ಮೂರುಗೋಳಿ ಬಳಿ ಮಗುಚಿ ಬಿದ್ದಿದೆ.
ದ್ವಿಚಕ್ರ ವಾಹನವೊಂದು ಅಡ್ಡ ಬಂದಿದ್ದು, ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡ ಅಟೋ ರಿಕ್ಷಾ ಮಗುಚಿ ಬಿದ್ದಿದೆ. ಘಟನೆಯಿಂದ ರಿಕ್ಷಾದಲ್ಲಿದ್ದ 8 ಮಂದಿ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಮನೆಗೆ ಮರಳಿದ್ದಾರೆ.