ಇಂದು ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಎಚ್ಚರಿಕೆ

ಇಂದು ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘುವಾಗಿ ಮಧ್ಯಮ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ವೇಗದಲ್ಲಿ ಸಂಭವಿಸುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಘಳಿಗೆಗೊಂದು ವಾತಾವರಣ ಇರಲಿದೆ. ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Check Also

ಮಂಗಳೂರು : ಮಾದಕ ವಸ್ತು ಮಾರಾಟ- ಮೂವರು ಪೊಲೀಸ್ ವಶಕ್ಕೆ

ಮಂಗಳೂರು : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಮೂವರನ್ನು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು …

Leave a Reply

Your email address will not be published. Required fields are marked *

You cannot copy content of this page.