ಕಡಬ: ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿ ಬಾಲಕನೋರ್ವ ಮೃತಪಟ್ಟ ಘಟನೆ ಕಡಬ- ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪದ ಮುರಚೆಡವು ಎಂಬಲ್ಲಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪಂಜ ನಿವಾಸಿ ನವೀನ್ ಎಂಬುವರ ಪುತ್ರ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದ. ತಕ್ಷಣವೇ ಬಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪಿಕಪ್ ಅತೀ ವೇಗ ಮತ್ತು ಆಟೋ ಚಾಲಕನ ದೃಷ್ಟಿಹೀನತೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.