![](https://thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg)
ದಾವಣಗೆರೆ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೀರು ತುಂಬಿದ ಬಕೆಟ್ ಗೆ ಬಿದ್ದು 10 ತಿಂಗಳ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಿಸ್ತುವಳ್ಳಿ ಗ್ರಾಮದ ಮಂಜುನಾಥ್ ಹಾಗೂ ತಾರಾ ದಂಪತಿಯ 10 ತಿಂಗಳ ಮಗಳು ಅನುಶ್ರಾವ್ಯ ಮೃತಪಟ್ಟಿದ್ದು, ಆಟವಾಡುತ್ತಿದ್ದ ವೇಳೆ ನೀರು ತುಂಬಿದ ಬಕೆಟ್ ಗೆ ಬಿದ್ದು ಅನುಶ್ರಾವ್ಯ ಸಾವನ್ನಪ್ಪಿದ್ದಾಳೆ. ಪೋಷಕರು ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯದಲ್ಲಿಯೇ ಮಗು ಸಾವನ್ನಪ್ಪಿದೆ.