ಮಂಗಳೂರಿನಲ್ಲಿ ತಡರಾತ್ರಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ಹಿಂದೂ ಕಾರ್ಯಕರ್ತರು ತಡೆದು ಹಲ್ಲೆಗೆ ಯತ್ನಿಸಿದ್ದಾರೆ.
ಮಂಗಳೂರು ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮುಸ್ಲಿಂ ಯುವಕರ ಜೊತೆ ಸುತ್ತಾಡುತ್ತಿದ್ದ ಹಿಂದೂ ಯುವತಿಯರನ್ನು ತಡೆದು ನಿಲ್ಲಿಸಿ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಜರಂಗ ದಳದ ಕಾರ್ಯಕರ್ತರು ತಡೆದು ನಿಲ್ಲಿಸಿದಾಗ ಜೋಡಿ ಹೊಟೇಲ್‌ಗೆ ಊಟಕ್ಕೆ ಬಂದಿರೋದಾಗಿ ಹೇಳಿದ್ದಾರೆ. ಮಧ್ಯರಾತ್ರಿ ಯಾವ ಹೊಟೇಲ್ ಇದೆ ಅಂತ ಹೇಳಿ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ.
ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ನಂತರ ಆ ಜೋಡಿ ಪೊಲೀಸ್ ಠಾಣೆಗೆ ತೆರಳಿ ವಿಚಾರಿಸಿ ಬಳಿಕ ಮನೆಗೆ ಕಳುಹಿಸಲಾಗಿದೆ.