ಲಾರಿ-ಕಾರು ಮುಖಾಮುಖಿ ಡಿಕ್ಕಿ, ಮೂವರು ಸಾವು: ಓರ್ವ ಗಂಭೀರ

ಶಿವಮೊಗ್ಗ: ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮೃತಪಟ್ಟವರನ್ನು ಕಾರಿನಲ್ಲಿದ್ದ ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ.

ಕಾರಿನ‌ಲ್ಲಿ ಹಿಂಬದಿ ಕುಳಿತಿದ್ದ ರುದ್ರೇಶ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

Check Also

ಪುತ್ತೂರು : ಅಪಪ್ರಚಾರಕ್ಕೆ ಮನನೊಂದು ಯುವತಿ ಆತ್ಮಹತ್ಯೆ..!!

ಪುತ್ತೂರು : ಅಪಪ್ರಚಾರಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ. ಕಾಣಿಯೂರು ಗ್ರಾಮದ ಅನಿಲ …

Leave a Reply

Your email address will not be published. Required fields are marked *

You cannot copy content of this page.